ಜಾಹೀರಾತಿಗಾಗಿ ನಮ್ಮನ್ನು ಸಂಪರ್ಕಿಸಬಹುದು

Educational revolution start : 500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 2500 ಕೋಟಿ ರೂ.

August 22, 2026 7:38 AM
---Advertisement---

ಬೆಂಗಳೂರು, ಆ.21: ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿ ಶುರುವಾಗಿದೆ. (Educational revolution start) 500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 2500 ಕೋಟಿ ರೂಪಾಯಿ ಖರ್ಚು ಮಾಡಲು ಸರ್ಕಾರ ಮುಂದಾಗಿದೆ.

ಕರ್ನಾಟಕದ 500 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ (KPS) ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ (ADB) ಸಹಯೋಗದೊಂದಿಗೆ ₹2500 ಕೋಟಿ ರೂ. ಮೊತ್ತದ ಮಹತ್ವಾಕಾಂಕ್ಷಿ ಯೋಜನೆಯ ಒಪ್ಪಂದಕ್ಕೆ ಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಸಹಿ ಹಾಕಲಾಯಿತು.

ಈ ವೇಳೆ ಡಿಸಿಎಂ ಡಾ ಜಿ ಪರಮೇಶ್ವರ್, ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್ ಹಾಗೂ ಎಡಿಬಿ ಉಪ ಕಾರ್ಯದರ್ಶಿ ಸೌರಭ್ ಸಿಂಗ್, ಎಡಿಎ ರಾಷ್ಟ್ರೀಯ ನಿರ್ದೇಶಕಿ ಮಿಯೋ ಓಕಾ, ಪ್ರಧಾನ ಪೋರ್ಟ್‌ಫೋಲಿಯೊ ನಿರ್ವಹಣಾ ತಜ್ಞ ಕೈ ವೇಯ್ ಯಿಯೋ, ಪ್ರಧಾನ ಯೋಜನಾ ಅಧಿಕಾರಿ (ಶಿಕ್ಷಣ) ಪೂನಂ ಎಸ್. ಭಾಂಬ್ರಿ, ಪ್ರಧಾನ ಸಂವಹನ ಅಧಿಕಾರಿ ರಾಜೇಶ್ ಕುಮಾರ್ ಡಿಯೋಲ್, ಕಾರ್ಯನಿರ್ವಾಹಕ ಸಹಾಯಕಿ ಪೂರ್ಣಿಮಾ ಪ್ರಸಾದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Educational revolution start

ಯೋಜನೆಯ ಒಟ್ಟು ಮೊತ್ತ 2500 ಕೋಟಿ ರೂ. ಈ ಪೈಕಿ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ₹1,750 ಕೋಟಿ ನೆರವು ನೀಡಲಿದ್ದು, ಕರ್ನಾಟಕ ಸರ್ಕಾರ ₹750 ಕೋಟಿ ಭರಿಸಲಿದೆ. 2026 ರಿಂದ 2030 ರ ನಡುವೆ ಈ ಯೋಜನೆ ಅನುಷ್ಠಾನಗೊಳ್ಳಲಿದೆ. ಪ್ರತಿ ಕೆಪಿಎಸ್ ಶಾಲೆಯಲ್ಲಿ ಕನಿಷ್ಠ 1,200 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುವ ಗುರಿ ಹೊಂದಲಾಗಿದೆ.

“ಇದು ಕೇವಲ ಶಾಲೆಗಳ ಅಭಿವೃದ್ಧಿಯ ಯೋಜನೆಯಲ್ಲ; ಮುಂದಿನ 50 ವರ್ಷಗಳ ಕರ್ನಾಟಕದ ಭವಿಷ್ಯ ನಿರ್ಮಿಸುವ ಯೋಜನೆ ಇದಾಗಿದೆ.

KPS ಶಾಲೆಗಳ ಅಭಿವೃದ್ಧಿಗೆ ಎಂಟು ಗ್ಯಾರಂಟಿ

KPS ಶಾಲೆಗಳಲ್ಲಿ LKGಯಿಂದ 12ನೇ ತರಗತಿವರೆಗೆ ಒಂದೇ ಆವರಣದಲ್ಲಿ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸುವ ಗುರಿ ಹೊಂದಲಾಗಿದೆ. ಇದರ ಭಾಗವಾಗಿ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ, ದ್ವಿಭಾಷಾ ಬೋಧನೆ, ಕಂಪ್ಯೂಟರ್ ಹಾಗೂ ಕೃತಕ ಬುದ್ಧಿಮತ್ತೆ (AI) ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ವೃತ್ತಿಪರ ಮಾರ್ಗದರ್ಶನಕ್ಕೆ ಆದ್ಯತೆ, ಸಂಗೀತ, ಸಾಹಿತ್ಯ ಮತ್ತು ಕ್ರೀಡೆಯಲ್ಲಿ ಪ್ರತಿಭೆ ಬೆಳೆಸುವುದು, ಪಠ್ಯೇತರ ಚಟುವಟಿಕೆಗಳಿಗೆ ಉತ್ತೇಜನ ನೀಡುವುದು ಹಾಗೂ ವಿದ್ಯಾರ್ಥಿಗಳ ನಿರಂತರ ಪ್ರಗತಿ ಮೇಲ್ವಿಚಾರಣೆಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಪ್ರತಿ ಎರಡು ತಿಂಗಳಿಗೊಮ್ಮೆ ಪೋಷಕರ ಸಭೆ ನಡೆಸುವ ಮೂಲಕ ಶಾಲೆ–ಪೋಷಕರ ಸಂಪರ್ಕ ಬಲಪಡಿಸುವಿಕೆ. 6ನೇ ತರಗತಿಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಹಾಗೂ ವೃತ್ತಿಪರ ಮಾರ್ಗದರ್ಶನ ನೀಡಲು ಯೋಜಿಸಲಾಗಿದೆ.

ಶಿಕ್ಷಕರ ಸಾಮರ್ಥ್ಯ ವೃದ್ಧಿಗೆ ವಿಶೇಷ ಕಾರ್ಯಯೋಜನೆ ರೂಪಿಸುವುದರ ಜೊತೆಗೆ 10 ಮತ್ತು 12ನೇ ತರಗತಿ ಪರೀಕ್ಷೆಗಳ ಫಲಿತಾಂಶ ಸುಧಾರಣೆಗೆ ವಿಶೇಷ ಗಮನ ನೀಡಲಾಗುತ್ತದೆ.

ಗ್ರಾಮೀಣ ಮಕ್ಕಳಿಗೆ ಜಾಗತಿಕ ಅವಕಾಶ

21ನೇ ಶತಮಾನದ ಕೌಶಲ್ಯಗಳನ್ನು ಶಿಕ್ಷಣದ ಭಾಗವನ್ನಾಗಿ ಮಾಡಿ, ಗ್ರಾಮೀಣ ಭಾಗದ ಮಕ್ಕಳು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯ ಹೊಂದುವಂತೆ ರೂಪಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಡಿಜಿಟಲ್ ಕಲಿಕೆ, ಕೌಶಲ್ಯಾಭಿವೃದ್ಧಿ, ವೃತ್ತಿ ಮಾರ್ಗದರ್ಶನ ಹಾಗೂ ಉತ್ತಮ ಶೈಕ್ಷಣಿಕ ಫಲಿತಾಂಶಗಳಿಗೆ ಒತ್ತು ನೀಡಲಾಗುತ್ತದೆ.

WhatsApp

Join Now

Telegram

Join Now

Leave a Comment